Visitors have accessed this post 407 times.
ಪುತ್ತೂರು: 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಬೆಂಗಳೂರಿನಲ್ಲಿ ಪೊಲೀಸ್ ಉದ್ಯೋಗಿಯಾಗಿರುವ ಸೌಮ್ಯ ಪೂಜಾರಿ ಆಯ್ಕೆ ಆಗಿದ್ದಾರೆ.
ಕಾಣಿಯೂರು ನಿವಾಸಿ ಸೌಮ್ಯ ಪೂಜಾರಿಯವರು ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿದ್ದರು ಎಂದು ತಿಳಿದು ಬಂದಿದೆ.
ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಪುತ್ರಿ ಹಾಗೂ ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ಅವರ ಸಹೋದರಿಯಾಗಿದ್ದಾರೆ ಎನ್ನಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿದ್ದಾರೆ. ಪಂಜಾಬ್‌ನ ಲ್ಯಾಮಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಸೌಮ್ಯ ಪೂಜಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.