ಬಂಟ್ವಾಳ : ಹಾಡಹಗಲೆ ಮಹಿಳೆ ಸರ ಕಿತ್ತೊಯ್ದ ಕಳ್ಳರು..!

ಬಂಟ್ವಾಳ: ಹಗಲು ಹೊತ್ತಿನಲ್ಲಿ ಅಂಗಡಿಯೊಂದರಲ್ಲಿ ಮಹಿಳೆಯೋರ್ವಳ ಕುತ್ತಿಗೆಗೆ ‌ಕೈ ಹಾಕಿ ಅಪರಿಚಿತ ವ್ಯಕ್ತಿಗಳಿಬ್ಬರು ಬಂಗಾರದ ಚೈನ್ ಎಳೆದು ಪರಾರಿಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಅಜ್ಜಿಬೆಟ್ಟು ಎಂಬಲ್ಲಿ ಮಧ್ಯಾಹ್ನ ನಡೆದಿದೆ.

ಬಿಸಿರೋಡಿನ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿ ಇರುವ ಮಹಾಲಕ್ಷ್ಮಿ ಸ್ಟೋರ್ ಮಾಲಕಿ ಸರೋಜಿನಿ ಅವರ ಕುತ್ತಿಗೆಯಿಂದ ಇಬ್ಬರು ಕಳ್ಳರು ಬಂಗಾರದ ಚೈನ್ ಎಗರಿಸಿ ಪರಾರಿಯಾಗಿರುವುದು.

 

ಸುಮಾರು 75 ಸಾವಿರ ಮೌಲ್ಯದ 1.50 ಪವನ್ ನ ಚಿನ್ನದ ಸರ ಕಳವಾಗಿದೆ.

ಮಧ್ಯಾಹ್ನ ಸುಮಾರು ‌ 2.45 ಗಂಟೆಗೆ ಕಳ್ಳತನ ನಡೆದಿದ್ದು, ಕಳವು ಮಾಡಿದ ಇಬ್ಬರು ವ್ಯಕ್ತಿಗಳು ಹೆಲ್ಮೆಟ್ ಧರಿಸಿದ್ದರು ಎಂದು ಅವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಮಹಾಲಕ್ಷ್ಮಿ ಸ್ಟೋರ್ ಮಾಲಕಿ ಸರೋಜಿನಿ ಅವರು ಇತ್ತೀಚೆಗೆ ಅಂಗಡಿಯನ್ನು ನವೀನ್ ಕುಲಾಲ್ ಎನ್ನುವವರಿಗೆ ಬಾಡಿಗೆಗೆ ನೀಡಿದ್ದರು.

‌ ನವೀನ್ ಕುಲಾಲ್ ಅವರು ಮಧ್ಯಾಹ್ನ ಊಟಕ್ಕೆ ಮನೆಗೆ ತೆರಳುವ ಸಂದರ್ಭದಲ್ಲಿ ಅಂಗಡಿಯಲ್ಲಿ ಮಾಲಕಿ ಸರೋಜಿನಿ ಅವರು ಕುಳಿತು ಕೊಂಡು ವ್ಯಾಪಾರವನ್ನು ನೋಡಿಕೊಳ್ಳುತ್ತಾರೆ.
ಅದೇ ರೀತಿ ಇಂದು ಕೂಡ ನವೀನ್ ಊಟಕ್ಕೆ ತೆರಳಿದಾಗ ಸರೋಜಿನಿ ಅಂಗಡಿಯಲ್ಲಿದ್ದರು.

ಅದೇ ಸಮಯದಲ್ಲಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿ ಗಳು ಹೆಲ್ಮೆಟ್ ಧರಿಸಿಕೊಂಡಿದ್ದರು, ಅದರಲ್ಲಿ ಹಿಂಬದಿ ಸವಾರ ಅಂಗಡಿಗೆ ಬಂದು ವಿಮಲ್ ಹಾಗೂ ಚಾಕಲೇಟ್ ಪಡೆದುಕೊಂಡು , 40 ರೂ ನೀಡಿದರು.

ಇವರ ಎರಡು ವಸ್ತುಗಳ ಬೆಲೆ 3 ಆಗಿದ್ದರಿಂದ ಚಿಲ್ಲರೆ ನೀಡುವ ಉದ್ದೇಶದಿಂದ ಕ್ಯಾಸ್ ಕೌಂಟರ್ ಗೆ ಬಗ್ಗಿದಾಗ ನಿಂತುಕೊಂಡಿದ್ದ ಅಪರಿಚಿತ ವ್ಯಕ್ತಿ ಸರೋಜಿನಿ ಅವರ ಕುತ್ತಿಗೆಯಲ್ಲಿದ್ದ ಬಂಗಾರ ಚೈನ್ ಎಳೆದುಕೊಂಡು ಬೈಕಿನಲ್ಲಿ ಕುಳಿತು ಪರಾರಿಯಾಗಿದ್ದಾರೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

 

Leave a Reply