Visitors have accessed this post 343 times.
ಸುಳ್ಯ ಸಮೀಪದ ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್ ಎಂಬಾತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚೊಕ್ಕಾಡಿ ಸಮೀಪದ ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಪುತ್ರ, ಶಮಂತ್ ಇಂದು ಬೆಳಗ್ಗೆ 6 ಗಂಟೆಗೆ ಮನೆಯಿಂದ ಹೊರಟು ತದನಂತರ ಶಾಲಾ ಆವರಣದ ಶೌಚಾಲಯದ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.