Visitors have accessed this post 656 times.
ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ (39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಪರಪ್ಪನ ಆಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗಲೆ ಪರ ಕೆಎಸ್‌ಎನ್ ರಾಜೇಶ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶ ದಿನೇಶ್ ಹೆಗ್ಡೆ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದಾರೆ. ಅದರಂತೆ ಡಿಸೆಂಬರ್ 20ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿ ಸರಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ಅವರಿಗೆ ನೋಟೀಸ್ ನೀಡಲಾಗಿದೆ. ನವೆಂಬರ್ 12ರಂದು ನೇಜಾರು ತೃಪ್ತಿ ಲೇಔಟ್‌ನಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಪ್ರವೀಣ್ ಚೌಗಲೆಯನ್ನು ಪೊಲೀಸರು ನವೆಂಬರ್ 14ರಂದು ಬಂಧಿಸಿದ್ದರು.