Visitors have accessed this post 867 times.
ಉಡುಪಿ:ರಂಗಕರ್ಮಿ, ಸಮಾಜಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20) , ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ. ಈ ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಲೀಲಾಧರ ಶೆಟ್ಟಿ ದಂಪತಿ ಕಳೆದ ವಾರ ಆತ್ಮಹತ್ಯೆಗೆ ಶರಣಾಗಿದ್ದರು. ಈ ದಂಪತಿ 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿಯವರು ಮನನೊಂದು ಮನೆಯಲ್ಲಿ ಕುತ್ತಿಗೆಗೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ.