November 8, 2025
WhatsApp Image 2023-12-18 at 2.01.59 PM

ವದೆಹಲಿ: 1993ರ ಮುಂಬೈ ಸ್ಫೋಟದ ಪಾತ್ರಕ್ಕಾಗಿ ಭಾರತಕ್ಕೆ ಬೇಕಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನದ ನಂತ್ರ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಈ ಬಗ್ಗೆ ಸರ್ಕಾರ ಅಥವಾ ಆಸ್ಪತ್ರೆ ಅಧಿಕಾರಿಗಳು ಯಾವುದೇ ದೃಢೀಕರಣವನ್ನು ನೀಡಿಲ್ಲ. ಅವರು ಎರಡು ದಿನಗಳಿಂದ ಆಸ್ಪತ್ರೆಯಲ್ಲಿದ್ದರು ಎಂದು ಮೂಲಗಳು ಹೇಳಿವೆ. ಅಂಡರ್‌ವರ್ಲ್ಡ್‌ ಡಾನ್‌ ದಾವೂದ್‌ಗೆ ಅಪರಿಚಿತ ವ್ಯಕ್ತಿಗಳು ವಿಷಪ್ರಾಶನ ಮಾಡಿದ್ದಾರೆ ಎಂದು ಪಾಕಿಸ್ತಾನ ಮೂಲದ ಹಲವು ಸಾಮಾಜಿಕ ಮಾಧ್ಯಮಗಳು ಹೇಳಿಕೊಂಡಿವೆ. ಆದಾಗ್ಯೂ, ಸಾಮಾಜಿಕ ಮಾಧ್ಯಮ ವರದಿಗಳಲ್ಲಿ ಯಾವುದೇ ಅಧಿಕೃತ ದೃಢೀಕರಣವಿಲ್ಲ.

ಅವರನ್ನು ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವೂದ್‌ನ ಸ್ಥಿತಿ ಚಿಂತಾಜನಕವಾಗಿದ್ದು, ಆತನನ್ನು ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ ಎಂದು ವರದಿಗಳು ಹೇಳಿವೆ.

About The Author

Leave a Reply