Visitors have accessed this post 303 times.

ಕುಂದಾಪುರ: ಕಾರು ಡಿಕ್ಕಿ ಹೊಡೆದು ವೃದ್ಧ ಪಾದಚಾರಿ ಸಾವು..!

Visitors have accessed this post 303 times.

ಕುಂದಾಪುರ: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾವುಂದದ ಮಸ್ಕಿ ನಡೆದಿದೆ.ಮೃತ ದುರ್ದೈವಿ ಗೋವಿಂದ ಖಾರ್ವಿ(70)  ಎಂದು ಗುರುತಿಸಲಾಗಿದೆ. ಕಾರು ಕುಂದಾಪುರ ಕಡೆಯಿಯಿಂದ ಬೈಂದೂರು ಕಡೆಗೆ ಚಲಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ದಾಟುತ್ತಿದ್ದ ವೃದ್ದನಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಗಂಗೊಳ್ಳಿಯ ಆಪದ್ಭಾಂಧವ ಇಬ್ರಾಹಿಂ ಗಂಗೊಳ್ಳಿ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *