Visitors have accessed this post 189 times.
ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಮೃತರು.ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ. ಅವಿವಾಹಿತರಾಗಿರುವ ಜಗದೀಶ್ ತಂದೆ ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.Related Posts
ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ಆತ್ಮಹತ್ಯೆ
Visitors have accessed this post 114 times.
ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ. ನೇಪಾಳ ಮೂಲದ ರಬೀನ ಬಿ.ಕೆ (16)ಮೃತ…
ಮಂಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಪ್ರಹಾರ
Visitors have accessed this post 44 times.
ಮಂಗಳೂರು ನಗರದಲ್ಲಿ ಬಸ್ ನಿಲ್ದಾಣವನ್ನು ಏಕಾಏಕಿ ತೆರವು ಮಾಡಿದ ಅಧಿಕಾರಿಗಳ ಕ್ರಮ ಖಂಡಿಸಿ ಎಬಿವಿಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹಂಪನಾಕಟ್ಟೆಯ…
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ವಿರುದ್ದ ಅವ್ಯವಹಾರದ ಆರೋಪ: ಗ್ರಾಮ ಸಭೆಯಲ್ಲಿ ಗ್ರಾಮಸ್ಥರಿಂದ ತರಾಟೆ
Visitors have accessed this post 1148 times.
ಪೆರುವಾಯಿ : ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಗುರುವಾರ ನಡೆದಿದ್ದ ಪೆರುವಾಯಿ ಗ್ರಾಮ ಪಂಚಾಯತ್ನ…