Visitors have accessed this post 457 times.
ಕುಂದಾಪುರ : ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಆದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಂಪಾರು ಸಮೀಪದ ಮೂಡುಬಗೆ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಮಂಗಳವಾರ ಸಂಜೆ ಕುಂದಾಪುರ ಕಡೆಯಿಂದ ಹೊಸಂಗಡಿ ಕಡೆಗೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ಆಲ್ಟೋ ಕಾರುಗಳು ಪರಸ್ಪರ ಡಿಕ್ಕಿಯಾಗಿವೆ. ಆಲ್ಟೋ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಆತ ಗಂಭೀರ ಗಾಯಗೊಂಡಿದ್ದಾರೆ. ಸ್ಯಾಂಟ್ರೋ ಕಾರಿನಲ್ಲಿ ಇಬ್ಬರು ಪ್ರಯಾಣಿಸಿದ್ದು ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ. ಸ್ಯಾಂಟ್ರೋ ಕಾರು ಸ್ಥಳೀಯರದ್ದೆಂದು ತಿಳಿದುಬಂದಿದೆ. ಅಪಘಾತದಲ್ಲಿ ಎರಡು ಕಾರುಗಳು ಸಂಪೂರ್ಣ ಜಖಂ ಗೊಂಡಿವೆ.