ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಶಿವಾಜಿನಗರ ಠಾಣೆ ಪೋಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದ್ದನ್ನು ವಿರೋಧಿಸಿ 2022ರಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು.
2022 ರಲ್ಲಿ ಶಾಸಕರಾಗಿದ್ದ ಯು.ಟಿ. ಖಾದರ್ ವಿರುದ್ಧ ಶಿವಾಜಿನಗರ ಠಾಣೆ ಪೋಲೀಸರು ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ತಮ್ಮ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆ ಸಬ್ ಇನ್ಸ್ಪೆಕ್ಟರ್ ದಾಖಲಿಸಿದ್ದ ಖಾಸಗಿ ದೂರು ಮತ್ತು ಆ ಕುರಿತ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದು ಪಡಿಸಬೇಕು ಎಂದು ಕೋರಿ ಯು.ಟಿ. ಖಾದರ್ ಅರ್ಜಿ ಸಲ್ಲಿಸಿದ್ದರು.
ಖಾದರ್ ಅವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಶಿವಾಜಿನಗರ ಠಾಣೆ ಪೊಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ರದ್ದುಪಡಿಸಿ ಆದೇಶಿಸಿದೆ.