ಉಡುಪಿ: ಆರೋಪಿ ಪ್ರವೀಣ್ ಜಾಮೀನು ಅರ್ಜಿ; ಆಕ್ಷೇಪಣೆಗೆ ಅವಕಾಶ

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ ಆರೋಪಿ ಪ್ರವೀಣ್ ಚೌಗುಲೆಯು ಜಾಮೀನು ಅರ್ಜಿ ಕೋರಿ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವ ಅವಕಾಶವನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದಿಗೆ ಮುಂದೂಡಿ ಆದೇಶ ನೀಡಿದೆ.

ಅರೋಪಿ ಪ್ರವೀಣ್ ಚೌಗುಲೆಯು ಡಿ. 14 ರಂದು ಜಾಮೀನಿಗೆ ಅರ್ಜಿ ಸಲ್ಲಿಸಿದ್ದನು. ಬಳಿಕ ಡಿ. 20 ರಂದು ಆರೋಪಿ ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ಅವರಿಗೆ ಕೋರ್ಟ್ ಅವಕಾಶ ನೀಡಿತ್ತು. ಆದರೆ ಅವರು ಬುಧವಾರ ರಜೆ ಮಾಡಿದ್ದ ಹಿನ್ನೆಲೆ ಕುಂದಾಪುರದ ಸರಕಾರಿ ಅಭಿಯೋಜಕಿ ಇಂದಿರಾ ನಾಯಕ್, ಕೋರ್ಟ್ ಗೆ ಹಾಜರಾಗಿ ಆಕ್ಷೇಪಣೆ ಸಲ್ಲಿಸಲು ಡಿ. 21 ರಂದು ದಿನಾಂಕ ನೀಡುವಂತೆ ಮನವಿ ಮಾಡಿಕೊಂಡರು.

ಈ ಹಿನ್ನೆಲೆ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸುವ ದಿನಾಂಕವನ್ನು ಇಂದಿಗೆ ಮುಂದೂಡಿದೆ.

Leave a Reply