Visitors have accessed this post 179 times.

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ಜ. 12 ರಂದು 5 ನೇ ಗ್ಯಾರಂಟಿ ʻಯುವನಿಧಿʼಗೆ ಅಧಿಕೃತ ಚಾಲನೆ

Visitors have accessed this post 179 times.

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ‘ಗ್ಯಾರಂಟಿ’ ‘ಯುವನಿಧಿ’ ಯೋಜನೆಗೆ ಡಿಸೆಂಬರ್‌ 26ರಿಂದ ನೋಂದಣಿ ಆರಂಭವಾಗಲಿದೆ. ಜನವರಿ 12 ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು.

ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.

ಯುವನಿಧಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?

ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು

ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ

ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ

ಆಧಾರ್‌ ಕಾರ್ಡ್‌

ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ)

ಬ್ಯಾಂಕ್ ಖಾತೆ ವಿವರ

ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.

Leave a Reply

Your email address will not be published. Required fields are marked *