ಮಂಗಳೂರು: ಮೀನು ಸಾಗಿಸುತ್ತಿದ್ದ ಈಚರ್ ಲಾರಿಯೊಂದು ಬೈಕಿಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಎಕ್ಕೂರು ಬಳಿ ನಡೆದಿದೆ.
ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತಪಟ್ಟವರು.
ಇವರು ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಅತಿ ವೇಗದ ಚಾಲನೆಯಿಂದ ಬೈಕಿಗೆ ಡಿಕ್ಕಿಯಾಗಿದೆ. ರಸ್ತೆಗೆ ಎಸೆಯಲ್ಪಟ್ಟ ಇವರ ದೇಹದ ಮೇಲೆಯೇ ಲಾರಿಯ ಚಕ್ರ ಹರಿದು ಹೋಗಿದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದಾರೆ.
ಮಂಗಳೂರು ನಗರ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.