ಉಡುಪಿ : ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅಫ್ಕಾರ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿ ಓದುತ್ತಿದ್ದ ಈತನಿಗೆ ಹುಟ್ಟಿನಿಂದಲೂ ಹೃದಯ ಸಂಬಂಧಿ ಕಾಯಿಲೆ ಇತ್ತು ಎನ್ನಲಾಗಿದೆ.
ಡಿ.6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದು ಡಿ.18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದನು. ನಂತರ ಮತ್ತೆ ಮನೆಗೆ ಹೋಗಿದ್ದ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.