ಬೆಂಗಳೂರು: ಗ್ಯಾಸ್ ಬಳಕೆದಾರರು ಏಜನ್ಸಿ ಬಳಿ ತೆರಳಿ ಆಧಾರ್ ಬಯೋಮೆಟ್ರಿಕ್ ಧೃಢೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು, ಗ್ಯಾಸ್ ಸಂಪರ್ಕ ಇರುವವರು ಏಜನ್ಸಿ ಬಳಿ ತೆರಳಿ ಬಯೋಮೆಟ್ರಿಕ್ ನೀಡಬಹುದಾಗಿದೆ ಎಂದು ತಿಳಿಸಿದೆ.
ಇನ್ನೂ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಮೊದಲ ಆದ್ಯತೆಯಲ್ಲಿ ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದಂತೆ ಆಧಾರ್ ಸಂಖ್ಯೆಯ ದಾಖಲೆಯೊಂದಿಗೆ ಈ ಹಿಂದೆ ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು ಬಯೋಮೆಟ್ರಿಕ್ ನೀಡಬಹುದಾಗಿದೆ ಎಂದು ಹೇಳಿದೆ.
ಈ ದೃಢೀಕರಣ ನೀಡಲು ಕೇಂದ್ರ ಸರಕಾರವು ಯಾವುದೇ ಗಡುವು ವಿಧಿಸಿಲ್ಲ. ಹಾಗಾಗಿ ಗ್ಯಾಸ್ ಬಳಕೆದಾರರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಆಹಾರ ಇಲಾಖೆಯ ಸ್ಪಷ್ಟ ಪಡಿಸಿದೆ. ಈ ಮೂಲಕ ಎಲ್ ಪಿಜಿ ಗ್ಯಾಸ್ ಬಳಕೆದಾರರಿಗೆ ಬಿಗ್ ರಿಲೀಫ್ ನೀಡಿದೆ.