
ಮೈಸೂರು : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.



ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್ ಸರ್ಕಾರ ತೆರವು ಮಾಡುತ್ತಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ತೆರಳಲು ಅವಕಾಶ ನೀಡಲು ಮುಂದಾಗಿದೆ.