
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ ಮಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಘಟನೆ ಹಿನ್ನಲೆ: ಅನ್ಯಕೋಮಿನ ಯುವಕನ ಜೊತೆ ಯುವತಿ ನಿಂತಿದ್ದನ್ನು ಅನ್ಯಕೋಮಿನ ಯುವಕನ ಜೊತೆ ಯುವತಿ ನಿಂತಿದ್ದನ್ನು ಪ್ರಶ್ನೆ ಮಾಡಿದ ಹಿಂದೂ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ, ಈ ನಡುವೆ ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಪರಾರಿಯಾಗಿದ್ದಾರೆ ಎನ್ನಲಾಗಿದೆ.