
ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ.



ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಓರ್ವ ಮೃತಪಟ್ಟಿದ್ದಾರೆ.
ಹಲವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.