
ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಹಿಳೆಯರ ಲೈಂಗಿಕ ಜೀವನ ಮತ್ತು ಕೌಟುಂಬಿಕ ಜೀವನವನ್ನು ಕೀಳಾಗಿ ಬಿಂಬಿಸಿದ ಹಾಗು ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ಎಂಬಾತನ ವಿರುದ್ದ SDPI ಬೆಂಬಲಿತ ಉಳಾಯಿಬೆಟ್ಟು ಪಂಚಾಯತ್ ಸದಸ್ಯೆ ಶೈನಾಝ್ ಉಳಾಯಿಬೆಟ್ಟು ರವರು ಮಂಗಳೂರು ಗ್ರಾಮಾಂತರ ಪೋಲೀಸ್ ಠಾಣೆಗೆ ದೂರನ್ನು ನೀಡಿದರು.



ಈ ಸಂಧರ್ಭದಲ್ಲಿ WIM ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಶಾ ವಾಮಂಜೂರು, WIM ಕಾರ್ಯಕರ್ತೆಯರಾದ ರಮೀಝ ಮೂಡುಶೆಡ್ಡೆ, ಸುಮಯ್ಯ ಮೂಡುಶೆಡ್ಡೆ ಉಪಸ್ಥಿತರಿದ್ದರು.