Visitors have accessed this post 1728 times.
ಮಂಗಳೂರಿನ ಸೋಮೇಶ್ವರ ದೇವಸ್ಥಾನ ಬಳಿ ನಿಂತಿದ್ದ ಕೇರಳ ಮೂಲದ ಅನ್ಯಕೋಮಿನ ವಿದ್ಯಾರ್ಥಿಗಳ ತಡೆದು ಸ್ಥಳೀಯ ಯುವಕರು ವಿಚಾರಣೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಉಳ್ಳಾಲ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ನಾಲ್ವರು ರಜೆ ಹಿನ್ನಲೆ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದರು. ಈ ತಂಡದಲ್ಲಿ ಇಬ್ಬರು ಹಿಂದೂ ಯುವತಿಯರು, ಓರ್ವ ಹಿಂದೂ ಯುವಕ ಮತ್ತು ಓರ್ವ ಮುಸ್ಲಿಂ ಯುವಕ ಇದ್ದಿದ್ದು, ದೇವಸ್ಥಾನಕ್ಕೆ ಆಗಮಿಸಿ ಸ್ಥಳೀಯವಾಗಿ ಸುತ್ತಾಡುತ್ತಿದ್ದ ಅವರನ್ನು ಸ್ಥಳೀಯರು ತಡೆದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮುಸ್ಲಿಂ ಯುವಕನ ಜೊತೆ ಇದ್ದ ಹಿಂದೂ ಯುವತಿಯ ತಡೆದು ಪ್ರಶ್ನೆ ಮಾಡಿದ ವೇಳೆ ಮುಸ್ಲಿಂ ಯುವಕ ದೇವಸ್ಥಾನಕ್ಕೆ ತೆರಳಿ ಹಣೆಗೆ ಗಂಧ ಹಚ್ಚಿಕೊಂಡು ಬಂದಿರುವುದು ತಿಳಿದು ಬಂದಿದೆ. ಈ ವೇಳೆ ಅನ್ಯಕೋಮಿನ ಜೋಡಿ ಎಂದು ಗೊತ್ತಾದ ಹಿನ್ನೆಲೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿ ಪೊಲೀಸರು ಯುವಕ-ಯುವತಿಯನ್ನ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿ ಮಾಹಿತಿ ಪಡೆದು ವಾಪಾಸ್ ಕಳುಹಿಸಿದ್ದಾರೆ.