ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ವತಿಯಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್ಟ ನ ಬಂಧನ ಕ್ಕೆ ಒತ್ತಾಯಿಸಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಯಿತು.

ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಹಿಳೆಯರ ಲೈಂಗಿಕ ಜೀವನ ಮತ್ತು ಕೌಟುಂಬಿಕ ಜೀವನವನ್ನು ಕೀಳಾಗಿ ಬಿಂಬಿಸಿದ ಹಾಗು ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿಘಟಕ ಅಧ್ಯಕ್ಷರಾದ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸದಸ್ಯರಾದ ಅಡ್ವೋಕೇಟ್ ಅಸ್ಮಾ, ಸೌದ ಬೆಳ್ತಂಗಡಿ ಉಪಸ್ಥಿತರಿದ್ದರು.

Leave a Reply