Visitors have accessed this post 334 times.
ಬಂಟ್ವಾಳ: ರಸ್ತೆ ದಾಟುತ್ತಿದ್ದಾಗ KSRTC ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಮಿತ್ತ ಬೈಲು ಎಂಬಲ್ಲಿ ನಡೆದಿದೆ.
ಡಿಸೆಂಬರ್ 25 ರಂದು ರಾತ್ರಿ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಮಿತ್ತ ಬೈಲು ಎಂಬಲ್ಲಿ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಬಂದ KA-21-F-0218 ನೇ KSRTC ಬಸ್ಸನ್ನು ಅದರ ಚಾಲಕ ರಾಮಕೃಷ್ಣ ಎಂಬವರು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯನ್ನು ದಾಟುತ್ತಿದ್ದ ಅಪರಿಚಿತ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿಯು ಡಾಮಾರು ರಸ್ತೆಗೆ ಎಸೆಯಲ್ಪಟ್ಟು ಬಿದ್ದು ಆತನ ತಲೆಗೆ ರಕ್ತಗಾಯ, ಕೈ ಕಾಲುಗಳಿಗೆ ತರಚಿದ ಗಾಯಗೊಂಡಿರುತ್ತಾರೆ. ಸದ್ರಿ ಅಪರಿಚಿತ ಗಾಯಾಳುವನ್ನು ಚಿಕಿತ್ಸೆ ಬಗ್ಗೆ ಬಂಟ್ವಾಳ ನಿವಾಸಿ ಅಬ್ದುಲ್ ಸಮದ್ ಎಂಬವರು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಯ ವೈದ್ಯರು ಪರೀಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ವೈದ್ಯರ ಸಲಹೆಯಂತೆ ಮಂಗಳೂರು ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುತ್ತಾರೆ. ಅಲ್ಲಿಯ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದವರು ಮರುದಿನ ಬೆಳಗ್ಗೆ ಮೃತ ಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 173/2023 ಕಲಂ : 279,304(ಎ) ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.