
ಮೈಸೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಒಂದರಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮುಸ್ಲಿಮ್ ಮಹಿಳೆಯರನ್ನು ಉದ್ದೇಶಿಸಿ ನೀಡಿದ ಹೇಳಿಕೆ ಕೋಮು ಪ್ರಚೋದನಕಾರಿ ಆಗಿದೆ. ಭಟ್ ಆ ಮೂಲಕ ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಯಾಗಿಸಿ , ಮತೀಯ ಉದ್ವಿಗ್ನತೆ ಸೃಷ್ಟಿಸುವ ಮತ್ತು ಮತೀಯ ಗಲಭೆಗಳನ್ನು ಹುಟ್ಟು ಹಾಕುವ ರೀತಿಯ ಹೇಳಿಕೆ ನೀಡಿರುತ್ತಾರೆ. ಪೋಲಿಸ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ,ಸರಕಾರ ಮತ್ತು ಸ್ಥಳೀಯ ಇಲಾಖೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಪ್ರಕರಣ ದಾಖಲು ಗೊಳಿಸಬೇಕು. ರಾಜ್ಯದಲ್ಲಿ ಏನಾದರೂ ಅಹಿತಕರ ಘಟನೆಗಳು ಸಂಭವಿಸಿದರೆ
ಸಿದ್ದರಾಮಯ್ಯ ಸರಕಾರವೇ ಕಾರಣ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಜಿಲ್ಲಾ ಕಾರ್ಯದರ್ಶಿ ರಿಯಾಝ್ ಹರೇಕಳ ಪ್ರಕಟಣೆ ಮೂಲಕ ಖಂಡಿಸಿದ್ದಾರೆ


