
ಪುತ್ತೂರು: ನಗರದ ಹೊರವಲಯದ ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ಮನೆ ವಸಂತ (42) ಅವರ ರಿಕ್ಷಾ ಕಾಣಿಯೂರು ರಸ್ತೆಯ . ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಸಂತ ಅವರು ಕಾಣಿಯೂರು ಪೇಟೆಯಲ್ಲಿ ಆಟೋರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು 27ರಂದು ಬೆಳಗ್ಗೆ 6 ಗಂಟೆಗೆ ಅವರ ಆಟೋರಿಕ್ಷಾದಲ್ಲಿ ಬಾಡಿಗೆಗೆಂದು ಮನೆಯಿಂದ ಹೋಗಿದ್ದರು. ಮಧ್ಯಾಹ್ನ ವಸಂತ ಅವರು ಊಟ ಮಾಡಿ ಆಟೋರಿಕ್ಷಾದಲ್ಲಿ ಮನೆಯಿಂದ ಹೋದವರು ಎಲುವೆ, ಎಂಬಲ್ಲಿಗೆ ಬಾಡಿಗೆಗೆ ಹೋಗುತ್ತಿರುವುದಾಗಿ ಅವರ ಅಣ್ಣ ಗಣೇಶ್ ಅವರಿಗೆ ತಿಳಿಸಿದ್ದರು. ಎಲುವೆ ಎಂಬಲ್ಲಿಯ ಕಾಡಿನ ಬಳಿ ಆಟೋ ರಿಕ್ಷಾ ರಸ್ತೆಯ ಬಳಿ ನಿಂತಿರುವುದು ಕಂಡುಬಂದಿದ್ದು ಸ್ವಲ್ಪ ದೂರದಲ್ಲಿ ಮರವೊಂದಕ್ಕೆ ನೈಲಾನ್ ಹಗ್ಗದಿಂದ ವಸಂತ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದ್ದರು. ಈ ಕುರಿತು ಡಿ. ವಸಂತ ಅವರ ಸಹೋದರ ಗಣೇಶ್ ಅವರು ಮರಣದಲ್ಲಿ ಸಂಶಯವಿದ್ದು, ತನಿಖೆ ನಡೆಸುವಂತೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


