Visitors have accessed this post 664 times.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ನೋಂದಣಿ ಮಾಡದೆ ಇರುವ ಅಕ್ರಮ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಗುರುವಾರ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ತಪಾಸಣೆ ನಡೆಸಿದ ವೇಳೆ ನಿಯಮಾನುಸಾರ ನೋಂದಣಿ ಮಾಡದೆ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರದ ವಿಚಾರ ಬೆಳಕಿಗೆ ಬಂದಿದೆ.
ಸ್ಕ್ಯಾನಿಂಗ್ ಯಂತ್ರವನ್ನು ಬಳಸಲು ನಿಯಮಾನುಸಾರ ಆರೋಗ್ಯ ಇಲಾಖೆಯಲ್ಲಿ ನೊಂದಣಿ ಮಾಡದ ಹಿನ್ನೆಲೆ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ಅದಿಕಾರಿಗಳು ವಶಪಡಿಸಿಕೊಂಡು ಜಪ್ತಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ದೀಪಾ ಪ್ರಭು ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಅಕ್ರಮವಾಗಿ ಸ್ಕ್ಯಾನಿಂಗ್ ಯಂತ್ರ ಬಳಕೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸುವುದಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಎಚ್ಚರಿಕೆ ನೀಡಿದ್ದಾರೆಯಾಗಿದೆ.