
ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎರಡು ಕಡೆ ಎಫ್ ಐ ಆರ್ ದಾಖಲಾಗಿದೆ.



ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಹೀಬ್ ವುಲ್ಲಾ ಹಾಗೂ ಉಸ್ಮಾನ್ ಎಂಬುವವರು ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಹಾಗೂ ಶೇಷಾದ್ರಿಪುರಂ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದು, ಎರಡೂ ಠಾಣೆಗಳಲ್ಲಿ ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ.
ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಂದು ಗಂಡ, ಪರ್ಮನೆಂಟ್ ಗಂಡನೇ ಇರಲಿಲ್ಲ. ಆದರೆ ತ್ರಿವಳಿ ತಲಾಕ್ ನಿಷೇಧದ ಮೂಲಕ ಪರ್ಮನೆಂಟ್ ಗಂಡನನ್ನು ಕೊಟ್ಟದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹೇಳಿಕೆ ನೀಡಿದ್ದರು. ಮುಸ್ಲಿಂ ಮಹಿಳೆಯರಿಗೆ ಅವಮಾನ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಕಲ್ಲಡ್ಕ ಪ್ರಭಾಕರ್ ಭಟ್, ಹೈಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು.
ಇದೀಗ ಮತ್ತೆ ಎರಡು ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.