Visitors have accessed this post 353 times.

ಮಂಗಳೂರು: ಎಂಡಿಎಂಎ ಮಾದಕವಸ್ತು ದಂಧೆ- ಓರ್ವನ ಬಂಧನ

Visitors have accessed this post 353 times.

ಮಂಗಳೂರು  : ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಓರ್ವನನ್ನು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಆರೋಪಿ ಮಹಮ್ಮದ್ ರಮೀಜ್(33) ದರ್ಗಾರೋಡ್, ಬಸ್ತಿ ಪಡ್ಪು ಕ್ವಾರ್ಟಸ್, ಉಳ್ಳಾಲ ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 5,11,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ.

ಡಿ.30 ರಂದು ಮಂಗಳೂರು ನಗರದ ಉಳ್ಳಾಲ ತಾಲೂಕು ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಯ ಎದುರು ಫೀಜಾ ಮಾಲ್ ಮೈದಾನದ ಬಳಿ ಒಬ್ಬ ವ್ಯಕ್ತಿ ಅಕ್ರಮವಾಗಿ ಎಂಡಿ ಎಂಎ ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. , ಆರೋಪಿ ಬೆಂಗಳೂರಿನಿಂದ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಖರೀದಿ ಮಾಡಿ ತಂದು ಉಳ್ಳಾಲ ಪರಿಸರದಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದನು.

ಆರೋಪಿತನಿಂದ 5 ಲಕ್ಷ ರೂ ಮೌಲ್ಯದ 100 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಮೇಲೆ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ, ದರೋಡೆಗೆ ಸಂಚು, ಕೊಲೆಯತ್ನ ಹಾಗೂ ಕೊಣಾಜೆ ಠಾಣೆಯಲ್ಲಿ ದರೋಡೆ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ.

ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ರವರ ನೇತೃತ್ವದಲ್ಲಿ ಈ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.

Leave a Reply

Your email address will not be published. Required fields are marked *