ಬಂಟ್ವಾಳ: ಬೈಕ್ ಅಪಘಾತದಲ್ಲಿ ರಂಗಭೂಮಿ ಕಲಾವಿದ ಮೃತ್ಯು

ಬಂಟ್ವಾಳ: ಬೈಕ್ ಅಪಘಾತದಲ್ಲಿ ರಂಗಭೂಮಿ ಕಲಾವಿದ ಮೃತಪಟ್ಟಿರುವ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರದೊಟ್ಟು ನಿವಾಸಿ ಗೌತಮ್ (26) ಎಂಬುವರು ಮೃತಪಟ್ಟಿದ್ದಾರೆ.

ಮೂಡುಬಿದಿರೆ ಪಿಂಗಾರ ಕಲಾವಿದರ ತಂಡದ ಕಲಾವಿದರಾಗಿದ್ದ ಗೌತಮ್ ಅವರು ಡಿ.30ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಳುವಾಯಿಯಲ್ಲಿ ನಾಟಕ ಮುಗಿಸಿ ಮನೆಗೆ ತೆರಳುತ್ತಿದ್ದರು. ದುರದೃಷ್ಟವಶಾತ್ ಅವರ ಸ್ಕೂಟರ್ ಅವರ ಮನೆ ಸಮೀಪದ ಮರಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ತಲೆಗೆ ಗಾಯವಾಗಿದೆ. ಬೆಳಗ್ಗೆಯಷ್ಟೆ ಘಟನೆ ಬೆಳಕಿಗೆ ಬಂದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅವಿವಾಹಿತರಾಗಿದ್ದ ಗೌತಮ್ ಅವರು ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ರಂಗಭೂಮಿಯಲ್ಲಿ ಉತ್ತಮ ಕಲಾವಿದರಾಗಿದ್ದ ಗೌತಮ್ ಅವರು ಹಲವಾರು ಸಂಘ ಸಂಸ್ಥೆಗಳ ನಾಟಕಗಳಲ್ಲಿ ನಟಿಸಿದ್ದರು.

Leave a Reply