May 14, 2026
WhatsApp Image 2024-01-01 at 10.31.44 AM

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಾಬಳ್ಳಿ ಬಸ್ ನಿಲ್ದಾಣದ ಬಳಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ.

ಪರಮೇಶ್ವರ್ ಗಾಯಗೊಂಡ ಯುವಕ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ಯಕೋನಿನ ಗುಂಪು ಪರಮೇಶ್ವರ್ ಗೆ ಚಾಕುವಿನಿಂದ ಇರಿದ ಆರೋಪ ಕೇಳಿ ಬಂದಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಮಾಹಿತಿ ತಿಳಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಪರಮೇಶ್ವರ್ ನಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿ ಕ್ರಮಕೈಗೊಂಡಿದ್ದಾರೆ.

About The Author

Leave a Reply