ಬೆಂಗಳೂರು : ಇನ್ಮುಂದೆ ಜಿಲ್ಲಾ ಪಂಚಾಯತ್ ‘CEO’ ಗಳು ವಾರಕ್ಕೊಮ್ಮೆ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡುವುದು ಕಡ್ಡಾಯವಾಗಿದೆ ಎಂದು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.
ಸಿಇಒಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದರು
.
ಸರ್ಕಾರದ ಆದೇಶ, ಸೂಚನೆ ಪಾಲಿಸದೇ ತಮ್ಮದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನೋಟಿಸ್ ನೀಡಬೇಕು ಎಂದು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ಪರಿಶೀಲಿಸಿದ ಸಚಿವರು ಕೆಲವು ಜಿಲ್ಲೆಗಳಲ್ಲಿ ಪ್ರಗತಿ ಕುಂಠಿತವಾಗಿರುವುದನ್ನು ಗಮನಿಸಿ ತಕ್ಷಣವೆ ಕಾಮಗಾರಿಗಳನ್ನು ಚುರುಕುಗೊಳಿಸಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಸೂಚನೆ ನೀಡಿದರು.
Like this:
Like Loading...
Related