Visitors have accessed this post 416 times.
ಬೆಂಗಳೂರು : ಇನ್ಮುಂದೆ ಜಿಲ್ಲಾ ಪಂಚಾಯತ್ ‘CEO’ ಗಳು ವಾರಕ್ಕೊಮ್ಮೆ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡುವುದು ಕಡ್ಡಾಯವಾಗಿದೆ ಎಂದು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಸಿಇಒಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದರು. ಸರ್ಕಾರದ ಆದೇಶ, ಸೂಚನೆ ಪಾಲಿಸದೇ ತಮ್ಮದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನೋಟಿಸ್ ನೀಡಬೇಕು ಎಂದು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ಪರಿಶೀಲಿಸಿದ ಸಚಿವರು ಕೆಲವು ಜಿಲ್ಲೆಗಳಲ್ಲಿ ಪ್ರಗತಿ ಕುಂಠಿತವಾಗಿರುವುದನ್ನು ಗಮನಿಸಿ ತಕ್ಷಣವೆ ಕಾಮಗಾರಿಗಳನ್ನು ಚುರುಕುಗೊಳಿಸಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಸೂಚನೆ ನೀಡಿದರು.Related Posts
ಕಂಕುಳಲ್ಲಿ ಮಗು ಇಟ್ಡುಕೊಂಡು ಚುನಾವಣೆಗೆ ಇಳಿದ ಕರಾವಳಿಯ ದಿಟ್ಟ ಮಹಿಳೆಯ ಕಥೆ- ಸುರೈಯ್ಯ ಅಂಜುಮ್
Visitors have accessed this post 2133 times.
ತೊಟ್ಟಿಲ್ಲನ್ನು ತೂಗುವ ಕೈ ದೇಶ ಆಳಬಲ್ಲದ್ದು ಎಂಬ ಹಳೆ ಗಾದೆ ಮಾತು ಇಂದಿನ ಟೆಕ್ನಾಲಜಿ ಯುಗದಲ್ಲೂ ಸಾಬೀತಾಗಿದೆ. ಸಾಮಾನ್ಯವಾಗಿ ಮಹಿಳೆಯರು ಮದುವೆ ಮಕ್ಕಳು ಆದ ಮೇಲೆ ತಮ್ಮ…
HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ..!
Visitors have accessed this post 1177 times.
ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನಿಗದಿಪಡಿಸಿದ್ದ ಗಡುವು ಮತ್ತೆ ಮೂರು ತಿಂಗಳು ವಿಸ್ತರಿಸುವುದಾಗಿ ಸರ್ಕಾರ ತಿಳಿಸಿದೆ. 2019ರ ಏಪ್ರಿಲ್ಗಿಂತ ಮೊದಲು ನೋಂದಣಿ ಮಾಡಿರುವ…
ಮಳೆ: ಸವ೯ ಸನ್ನದ್ಧರಾಗಿರಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
Visitors have accessed this post 319 times.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಸಂಪೂಣ೯ ಸನ್ನದ್ಧವಾಗಿರಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ…