Visitors have accessed this post 351 times.

ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆ

Visitors have accessed this post 351 times.

ಮಂಗಳೂರು : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ( ಎಸ್‌ಡಿಪಿಐ)ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಪಕ್ಷದ ಕಚೇರಿಯಲ್ಲಿ ನಡೆಯಿತು

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಜಾತ್ಯತೀತ ಮುಖವಾಡ ಹೊತ್ತು 85 ಶೇಕಡಾ ಮುಸ್ಲಿಮರ ಮತ ಪಡೆದು ಸರಕಾರ ಕಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಸ್ಲಿಮರ ಆರಾಧನ ಕೇಂದ್ರ ವಾದಂತಹ ಬಾಬರಿ ಮಸೀದಿಯನ್ನು ಕೆಡವಿ ನಿರ್ಮಾಣವಾಗುತ್ತಿರುವ ರಾಮ ಮಂದಿರವನ್ನು ಸ್ವಾಗತಿಸುತ್ತಿದ್ದಾರೆ, ಹಾಗೂ ಮುಸ್ಲಿಂ ಸಮುದಾಯದ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ, ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಲು ಅವಕಾಶ ನೀಡದೆ ಸಂವಿದಾನ ಬದ್ಧವಾದ ಹಕ್ಕುಗಳನ್ನು ಕಸಿದು ಕೊಳ್ಳುತ್ತಿರುವ ಮೂಲಕ ಮುಸ್ಲಿಂ ಸಮುದಾಯಕ್ಕೆ ಅವರು ಕೊಡುತ್ತಿರುವ ಸಂದೇಶ ಏನಾಗಿದೆ ಎಂದು ಪ್ರಶ್ನಿಸಿದ್ದಾರೆ.
ಬಾಬರಿ ಮಸೀದಿ ಕೆಡವಿದಂತಹ ಆರೋಪಿಗಳನ್ನು ಅದೇ ರೀತಿ ಅದರ ನಂತರ ನಡೆದಂತಹ ಗಲಭೆಗಳ ಆರೋಪಿಗಳನ್ನು ರಾಮನ ಭಕ್ತರೆಂದು ಬಿಂಬಿಸುತ್ತಿರುವುದು ಈ ದೇಶದ ದೊಡ್ಡ ದುರಂತವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜನವರಿ ತಿಂಗಳಲ್ಲಿ ನಡೆಯುವ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸುವ ಬಗ್ಗೆ ಕಾರ್ಯ ಯೋಜನೆಯನ್ನು ರೂಪಿಸಲಾಯಿತು, ಹಾಗೂ ಸದಸ್ಯತ್ವ ಅಭಿಯಾನದ ಪೋಸ್ಟರನ್ನು ಸಬೆಯಲ್ಲಿ ಬಿಡುಗಡೆಗೊಳಿಸಲಾಯಿ, ಮುಂದಿನ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಶ್ರಫ್ ಅಡ್ಡೂರು,ಜಮಾಲ್ ಜೋಕಟ್ಟೆ , ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ ಹಾಗೂ ಶಾಕಿರ್ ಅಳಕೆಮಜಲ್,ಸುಹೈಲ್ ಖಾನ್, ಮಹಿಳಾ ಘಟಕವಾದ ವಿಮೆನ್ ಇಂಡಿಯಾ ಮೂಮೆಂಟ್ ಇದರ ಜಿಲ್ಲಾಧ್ಯಕ್ಷೆ ನೌರೀನ್ ಆಲಂಪಾಡಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ನಿಶಾ ವಾಮಂಜೂರ್ ಹಾಗೂ ಜಿಲ್ಲಾ ಸಮಿತಿಯ ಸಮಿತಿ ಸದಸ್ಯರು ಮತ್ತು ವಿಧಾನಸಬಾ ಕ್ಷೆತ್ರ ಸಮಿತಿಯ ಅಧ್ಯಕ್ಷರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಸ್ವಾಗತಿಸಿ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲ್ ಧನ್ಯವಾದಗೈದರು

Leave a Reply

Your email address will not be published. Required fields are marked *