October 13, 2025
WhatsApp Image 2024-01-04 at 10.35.51 AM

ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ವಿಜಯ ಕಾಲೇಜು ಜಯನಗರ, ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ರಾಜ್ಯಮಟ್ಟದ ಖಿದ್ಮಾ ಕಾವ್ಯಾಮೃತ – 2024 ಕಾರ್ಯಕ್ರಮ ಜನವರಿ 7ನೇ ತಾರೀಖಿನ ಭಾನುವಾರದಂದು ಬೆಂಗಳೂರಿನ ಜಯನಗರ ನಾಲ್ಕನೇ ಹಂತದಲ್ಲಿರುವ ವಿಜಯ ಕಾಲೇಜಿನ ಹಸಿರು ಭವನದಲ್ಲಿ ನಡೆಯಲಿದೆ.

ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ 35ರಷ್ಟು ಕವಿಗಳು ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲಿದ್ದಾರೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಲವು ಕಲಾವಿದರು ಭಾಗವಹಿಸಲಿದ್ದಾರೆ ಮತ್ತು ಕರ್ನಾಟಕ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಹತ್ತರಷ್ಟು ಸಾಧರಿಕರಿಗೆ ಖಿದ್ಮಾ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ಕಾರ್ಯಕ್ರಮದ ಆಯೋಜಕ ಹಾಗೂ ಸಂಚಾಲಕ ಆಮಿರ್ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply