Visitors have accessed this post 1711 times.
ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು.
‘ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕರೂ ಆಗಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ’ ಎಂದು ಆಕ್ರೋಶ ಹೊರಹಾಕಿದರು.