ಮೆಟಾ ಒಡೆತನದ ವಾಟ್ಸ್‌ಆ್ಯಪ್ ಕಳೆದ ನವೆಂಬರ್ ತಿಂಗಳಲ್ಲಿ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ ಎಂದು ವರದಿಯಾಗಿದೆ.
2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್‌ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಕಳೆದ ವರ್ಷ ನವೆಂಬರ್ 1 ಮತ್ತು ನವೆಂಬರ್ 30 ರ ನಡುವೆ 71,96,000 ಖಾತೆಗಳನ್ನು ನಿಷೇಧಿಸಲಾಗಿದ್ದು, ವಾಟ್ಸ್‌ಆ್ಯಪ್ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರಿಂದ ಸ್ವೀಕರಿಸಿದ 8,000 ಕ್ಕೂ ಹೆಚ್ಚು ಕುಂದುಕೊರತೆಗಳ ಮೇಲೆ ಈ ಖಾತೆಗಳನ್ನು ನಿಷೇಧಿಸುವ ನಿರ್ಧಾರವನ್ನು ವಾಟ್ಸ್‌ಆ್ಯಪ್ ತೆಗೆದುಕೊಂಡಿದೆ.
ಇನ್ನು ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ.