Visitors have accessed this post 293 times.

ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ ಯಾಕೆ ಗೊತ್ತಾ?

Visitors have accessed this post 293 times.

ಮೆಟಾ ಒಡೆತನದ ವಾಟ್ಸ್​ಆ್ಯಪ್ ಕಳೆದ ನವೆಂಬರ್ ತಿಂಗಳಲ್ಲಿ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ ಎಂದು ವರದಿಯಾಗಿದೆ.

2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಕಳೆದ ವರ್ಷ ನವೆಂಬರ್ 1 ಮತ್ತು ನವೆಂಬರ್ 30 ರ ನಡುವೆ 71,96,000 ಖಾತೆಗಳನ್ನು ನಿಷೇಧಿಸಲಾಗಿದ್ದು, ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರಿಂದ ಸ್ವೀಕರಿಸಿದ 8,000 ಕ್ಕೂ ಹೆಚ್ಚು ಕುಂದುಕೊರತೆಗಳ ಮೇಲೆ ಈ ಖಾತೆಗಳನ್ನು ನಿಷೇಧಿಸುವ ನಿರ್ಧಾರವನ್ನು ವಾಟ್ಸ್​ಆ್ಯಪ್ ತೆಗೆದುಕೊಂಡಿದೆ.

ಇನ್ನು ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ.

Leave a Reply

Your email address will not be published. Required fields are marked *