ಹಿಂದು ದೇಗುಲದ ಮೇಲೆ ಖಲಿಸ್ತಾನಿಗಳ ದಾಳಿ : ಮೋದಿ ಬಗ್ಗೆ ಆಕ್ಷೇಪಾರ್ಹ ಬರಹ

ವದೆಹಲಿ : ಅಮೆರಿಕದಲ್ಲಿ ಮತ್ತೊಂದು ಹಿಂದೂ ದೇಗುಲದ ಮೇಲೆ ಖಲಿಸ್ತಾನಿಗಳು ದಾಳಿ ಮಾಡಿದ್ದು, ಗೋಡೆಗಳ ಮೇಲೆ ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಬರಹ ಬರೆದಿದ್ದಾರೆ.

ಅಮೆರಿಕದ ಕ್ಯಾಲಿಪೊರ್ನಿಯಾ ನಗರದ ಹಿಂದೂ ದೇಗುಲದ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದಾರೆ.

ಬಳಿಕ ದೇಗುಲದ ಗೋಡೆ ಮೇಲೆ ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಬರಹ ಬರೆದಿದ್ದಾರೆ.

ಇನ್ನು ಇದಕ್ಕೂ ಮುನ್ನ ಖಲಿಸ್ತಾನಿಗಳು ಕ್ಯಾಲಿಫೋರ್ನಿಯಾದ ನೆವಾರ್ಕ್ನಲ್ಲಿರುವ ಸ್ವಾಮಿನಾರಾಯಣ ಮಂದಿರವನ್ನು ವಿರೂಪಗೊಳಿಸಿದ ನಂತರ ಭಾರತ ಬಲವಾದ ಖಂಡನೆ ವ್ಯಕ್ತಪಡಿಸಿದೆ. ಭಾರತ ವಿರೋಧಿ ಗೀಚುಬರಹವನ್ನು ಒಳಗೊಂಡ ಘಟನೆಯನ್ನು ಖಲಿಸ್ತಾನ್ ಪರ ಕಾರ್ಯಕರ್ತರು ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

Leave a Reply