
ಉಡುಪಿ: ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವಸತಿಗೃಹದ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಉಡುಪಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತರನ್ನು ಮಧು ಹಾಗೂ ರೂಂ ಬಾಯ್ ಸುಕುಮಾರ್ ಎಂದು ಗುರುತಿಸಲಾಗಿದೆ. ಮೂಡನಿಡಂಬೂರು ಗ್ರಾಮದ ಮೀನು ಮಾರ್ಕೆಟ್ ಬಳಿ ವಾಣಿಜ್ಯ ಕಟ್ಟಡದಲ್ಲಿರುವ ಲಾಡ್ಜ್ ರೂಂಗೆ ಮಹಿಳೆಯರನ್ನು ಕರೆಸಿ ಅಕ್ರಮವಾಗಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ದೊರೆತ ಮಾಹಿತಿಯಂತೆ ದಾಳಿ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 03/2024 , ಕಲಂ: 370 ಐಪಿಸಿ & 3,4,5,6,7 ಐಟಿಪಿ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.


