Visitors have accessed this post 310 times.

ಇಟಲಿಗೆ ಓದಲು ಹೋಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆ; ಕಾರಣ ನಿಗೂಢ

Visitors have accessed this post 310 times.

ಭಾರತ ಮೂಲದ ವಿದ್ಯಾರ್ಥಿಯೊಬ್ಬ ಇಟಲಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ರಾಮ್ ರಾವುತ್ ಶವವಾಗಿ ಪತ್ತೆಯಾದ ವಿದ್ಯಾರ್ಥಿ. ರಾಮ್ ರಾವುತ್ ಜ.2 ರಂದು ಸಾವನ್ನಪ್ಪಿದ್ದು, ಪೋಷಕರು ಆತನ ಮೊಬೈಲ್ ಗೆ ಕರೆ ಮಾಡಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

 

ರಾವುತ್ ಎಂಬಿಎ ಓದಲು ಇಟಲಿಗೆ ಹೋಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹೊಸ ವರ್ಷದ ಶುಭಾಶಯಗಳನ್ನು ತಿಳಿಸಲು ರಾವುತ್ ಅವರ ಪೋಷಕರು ಕರೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ.

ಕರೆ ಮಾಡಿದ ವೇಳೆ ಮಗ ಫೋನ್ ಸ್ವೀಕರಿಸಲಿಲ್ಲ. ಆ ಬಳಿಕ ಪೋಷಕರು ರಾವುತ್ ಮನೆಯ ಮಾಲೀಕನಿಗೆ ಕರೆ ಮಾಡಿದ್ದಾರೆ. ಮಾಲೀಕ ಹೋಗಿ ನೋಡಿದಾಗ ರಾವುತ್ ವಾಶ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಸಾವಿಗೆ ಕಾರಣ ಏನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ರಾಮ್ ರಾವುತ್ ಅವರ ಕುಟುಂಬವು ಅವರ ದೇಹವನ್ನು ಭಾರತಕ್ಕೆ ತರಲು ಜಾರ್ಖಂಡ್‌ನ ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ಸಂಪರ್ಕಿಸಿದೆ.

ಪಶ್ಚಿಮ ಸಿಂಗ್‌ಭೂಮ್‌ನ ಡೆಪ್ಯುಟಿ ಕಮಿಷನರ್ ಅನನ್ಯ ಮಿತ್ತಲ್ ಅವರು ರಾಮ್ ರಾವತ್ ಸಾವಿನ ಬಗ್ಗೆ ಮಾಹಿತಿ ಪಡೆದಿದ್ದು, ಅಗತ್ಯ ಕ್ರಮಕ್ಕಾಗಿ ಗೃಹ ಇಲಾಖೆ ಮತ್ತು ಜಾರ್ಖಂಡ್‌ನ ವಲಸೆ ಸೆಲ್‌ಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಕರಣದ ಎಲ್ಲಾ ಬೆಳವಣಿಗೆಗಳ ಮೇಲೆ ನಿಗಾ ಇಡುತ್ತಿದ್ದೇನೆ ಮತ್ತು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಮಿತ್ತಲ್ ಹೇಳಿದ್ದಾರೆ.

Leave a Reply

Your email address will not be published. Required fields are marked *