Visitors have accessed this post 1035 times.
ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.
ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16) ಮೃತ ಯುವತಿ. ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇನ್ನು ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು ವರದಿಯಾಗಿದೆ. ಈಶ್ವರಮಂಗಲ ಹೊರಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.