Visitors have accessed this post 455 times.
ಮಂಗಳೂರು: ನಗರದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 98 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ. ಜ.8ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX 816 ನಲ್ಲಿ ಅಬುಧಾಬಿಯಿಂದ ಮಂಗಳೂರಿಗೆ ಬಂದಿಳಿದಿದ್ದಾನೆ. ಈತನ ಅನುಮಾನಾಸ್ಪದ ಚಲನವಲನವನ್ನು ನೋಡಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ಪರಿಶೀಲನೆ ಮಾಡಿದ್ದಾರೆ. ಆತನ ದೇಹವನ್ನು ಪರೀಕ್ಷಿಸಿದ ವೇಳೆ, ಆತನ ಸೊಂಟದ ಪ್ರದೇಶದಲ್ಲಿ ಬೀಪ್ ಸದ್ದು ಹೊರಹೊಮ್ಮಿದೆ. ಕೂಲಂಕಷವಾಗಿ ಪರಿಶೀಲನೆ ನಡೆಸಿದಾಗ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಹೊಂದಿರುವ 5 ಅಂಡಾಕಾರದ ಆಕಾರದ ವಸ್ತುಗಳು ಆತನ ಗುದನಾಳದಲ್ಲಿ ಪತ್ತೆಯಾಗಿದೆ. ಇದರಲ್ಲಿ 24 ಕ್ಯಾರೆಟ್ ಶುದ್ಧತೆಯ 1579 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 98,68,750 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.