August 30, 2025
WhatsApp Image 2023-11-30 at 9.10.03 AM

ಇತ್ತೀಚಿಗೆ ರಾಜ್ಯದಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಮತ್ತೆ ಇದೀಗ ರಾಜ್ಯ ರಾಜಧಾನಿಯಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು 9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಖಾಸಗಿ ಬಸ್ ಕ್ಲೀನರ್ ಒಬ್ಬ ಅತ್ಯಾಚಾರ ಎಸಿಗಿರುವಂತಹ ಘಟನೆ ಜರುಗಿದೆ.

 

ಖಾಸಗಿ ಬಸ್ ಕ್ಲೀನರ್ ನಿಂದ 9ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅತ್ಯಾಚಾರ ಆರೋಪಿ ದೊಡ್ಡಬಳ್ಳಾಪುರದ ಆನಂದ್ (24)ಎಂದು ಹೇಳಲಾಗುತ್ತಿದ್ದು ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಕಳೆದ ಒಂದು ವಾರದ ಹಿಂದೆ ಶಾಲೆಗೆ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಮೊಬೈಲ್ ಕರೆ ಆಧರಿಸಿ ಇದೀಗ ಅತ್ಯಾಚಾರಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2021 ರಲ್ಲಿ ಕೂಡ ಪೋಕ್ಷೋ ಪ್ರಕರಣದಲ್ಲಿ ಆನದ 3 ವರ್ಷಗಳ ಕಾಲ ಜೈಲಿನಲ್ಲಿದ್ದ ಎನ್ನಲಾಗಿದೆ.

ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಸದ್ಯ ಯಲಹಂಕ ಬಳಿ ಬಾಡಿಗೆ ಮನೆಯಲ್ಲಿ ಇರಿಸಿದ ಬಾಲಕಿಯನ್ನು ಪೊಲೀಸರು ರಕ್ಷಣೆ ಮಾಡಲಾಗಿದ್ದು,ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply