
ಮಂಗಳೂರು: ನಗರದಲ್ಲಿ ನಾಪತ್ತೆಯಾಗಿದ್ದ ಕೃಷ್ಣಾಪುರದ ಯುವಕನ ಮೃತದೇಹ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ.



ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು ಗುರುತಿಸಲಾಗಿದೆ.
ಮಂಗಳೂರು ಎ.ಜೆ. ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಯಾಗಿದ್ದ ಈತ ಕೆಲ ದಿನಗಳ ಹಿಂದೆ ಮಂಜೇಶ್ವರ ಪರಿಸರ ದಲ್ಲಿರುವ ಸಂಬಂಧಿಕರ ಮನೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿತ್ತು. ತನಿಖೆ ನಡೆಸುತ್ತಿದ್ದ ಪೊಲೀಸರು ಬುಧವಾರ ಸಂಜೆ ಕೊಪ್ಪಳ ನದಿಯಲ್ಲಿ ಯುವಕನ ಮೃತದೇಹ ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಮೃತ ದೇಹದ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಮಂಜೇಶ್ವರ ಠಾಣಾ ಪೊಲೀಸರು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿದು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದ ಮೃತ ದೇಹದ ಗುರುತನ್ನು ಕುಟುಂಬಸ್ಥರು ಪತ್ತೆ ಹಚ್ಚಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.