Visitors have accessed this post 871 times.
ಚಾರ್ಮಾಡಿ : ಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ವೇಳೆ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.
ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದೆ. ತಕ್ಷಣ ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.