
ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.



ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಪೊಲೀಸರು ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈವರೆಗೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ.
ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.
ನೈತಿಕ ಪೊಲೀಸ್ ಗಿರಿ ನಡೆಸಿದ ಬಳಿಕ ಯುವಕರ ಗುಂಪು ಮಹಿಳೆಯನ್ನು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ಥ ಮಹಿಳೆ ದೂರು ದಾಖಲಿಸಿದ್ದರು.
ಇನ್ನು ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಮನೆಗೆ ಇಂದು ಬಿಜೆಪಿ ಮಹಿಳಾ ನಿಯೋಗ ಭೇಟಿ ನೀಡುತ್ತಿದೆ.