October 24, 2025
WhatsApp Image 2023-12-05 at 5.16.36 PM

ಬೆಳ್ತಂಗಡಿ: ಮಕ್ಕಳ ಜೊತೆ ಆಟವಾಡುತ್ತಿದ್ದ ವೇಳೆ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಪಣಕಜೆ ನಿವಾಸಿ ಮುಹಮ್ಮದ್ ಹನೀಫ್ ಎಂಬವರ ಪುತ್ರ   (7) ಮೃತಪಟ್ಟ ಬಾಲಕ. ಈತ ಸ್ಥಳೀಯ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಸೋಮವಾರ ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಕಟ್ಟೆ ಇಲ್ಲದ ಬಾವಿಯ ಬಳಿ ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರೂ ಮೃತಪಟ್ಟಿರುವುದಾಗಿ ವರದಿಯಾಗಿದೆ.ಪುಂಜಾಲಕಟ್ಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

About The Author

Leave a Reply