Visitors have accessed this post 136 times.
ಮಂಗಳೂರು ನಗರದ ಕಾವೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುದುರೆಮುಖ ಕಂಪೆನಿಯ ಉದ್ಯೋಗಿ ದಾರುಣ ಅಂತ್ಯ ಕಂಡಿದ್ದಾರೆ.
ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ. ಕುದುರೆ ಮುಖ ಕಂಪೆನಿಯ ಮಂಗಳೂರು ಪೋರ್ಟ್ ಫೆಸಿಲಿಟೀಸ್ ವಿಭಾಗಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖರಪ್ಪ ನವರು ಮಂಗಳವಾರ ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ತಮ್ಮ ಕ್ವಾಟರ್ಸ್ ಕಂಪೌಂಡ್ ಗೆ ಹೋಗಲು ಡಿವೈಡರ್ ಕಡೆಯಿಂದ ಬೈಕ್ ತಿರುಗಿಸಿದಾಗ ಬೋಂದೆಲ್‌ನಿಂದ ಕಾವೂರು ಕಡೆಗೆ ಬರುತ್ತಿದ್ದ ಕಾರೋಂದು ವೇಗವಾಗಿ ಬಂದು ಇವರ ಬೈಕಿಗೆ ಢಿಕ್ಕಿ ಹೊಡೆದಿದೆ. ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಶೇಖರಪ್ಪರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ರೂ ಫಲಕೊಡದೆ ಸಾವನ್ನಪ್ಪಿದ್ದಾರೆ. ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.