October 23, 2025
WhatsApp Image 2023-12-26 at 10.11.20 AM

ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯರ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ.

ಪ್ರಭಾಕರ್‌ ಭಟ್‌ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜನವರಿ 10ರಂದು ಕಾಯ್ದಿರಿಸಿದ್ದ ಆದೇಶವನ್ನು ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೋಪಾಲ ಕೃಷ್ಣ ರೈ ಟಿ ಅವರು ಇಂದು ಪ್ರಕಟಿಸಿದರು. ಅರ್ಜಿದಾರ/ಆರೋಪಿಯು ಎರಡು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಸಾಕ್ಷ್ಯ ತಿರುಚಬಾರದು. ತನಿಖಾಧಿಕಾರಿ ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.
ಪ್ರಭಾಕರ್‌ ಭಟ್‌ ಗಂಭೀರ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಡಿಸೆಂಬರ್‌ 28ರಂದು ಶ್ರೀರಂಗಪಟ್ಟಣ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

About The Author

Leave a Reply