ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ : ಇಬ್ಬರು ಕಾರ್ಮಿಕರ ಸಾವು 20 ಜನರಿಗೆ ಗಂಭೀರ ಗಾಯ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಕಟ್ಟಡದ ಅವಶೇಷಗಳಡಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 20 ಜನರಿಗೆ ಗಂಭೀರವಾದ ಗಾಯವಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

 

ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ ದುರ್ಘಟನೆ ಸಂಭವಿಸಿದೆ.ಕಟ್ಟಡದ ಅವಶೇಷಗಳ ಅಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಇನ್ನೂ ಗಾಯಾಳುಗಳಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನೇಸ್ ಶಾಲಾ ಕಟ್ಟಡದ ಎರಡನೇ ಅಂತಸ್ತಿನ ನಿರ್ಮಾಣ ವೇಳೆ ಕಟ್ಟಡ ಕುಸಿದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾರಿಸಿದ್ದು ಕಟ್ಟಡ ತೆರವಿಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

Leave a Reply