
ಮಂಗಳೂರು ಸಿಸಿಬಿ ಪೊಲೀಸರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ಪದಾರ್ಥ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.



ಮಂಗಳೂರು ಬಜಾಲ್ ನಿವಾಸಿ ತೌಸೀಫ್ @ ತೌಚಿ(23) ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನಿಂದ ಒಟ್ಟು 5,11,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ. ಜನವರಿ 18 ರಂದು ನಗರದ ಪಳ್ನೀರ್ ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ. ಆರೋಪಿತನಿಂದ 45 ಸಾವಿರ ರೂ ಮೌಲ್ಯದ 9 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾ ಸೇರಿ ಒಟ್ಟು 5,11,000/- ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ.ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ರೀ ಶ್ಯಾಮ್ ಸುಂದರ್ ರವರ ನೇತೃತ್ವದಲ್ಲಿ ಈ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.